'ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಿ'
Update: 2019-07-31 22:23 IST
ಮಂಗಳೂರು: ಸಾಮೂಹಿಕ ಪ್ರಾರ್ಥನೆ ನಿರ್ವಹಿಸುವ ಸಂದರ್ಭ ರಸ್ತೆ ಬದಿಯಲ್ಲಿ ಅವ್ಯವಸ್ಥಿತವಾದ ರೀತಿಯಲ್ಲಿ ವಾಹನ ಪಾರ್ಕಿಂಗ್ ಮಾಡುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗುವ ಸಂಭವವಿದೆ. ಪವಿತ್ರ ಇಸ್ಲಾಂ ಧರ್ಮವು ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ವಿರೋಧಿಸುತ್ತದೆ ಎಂದು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಅಧ್ಯಕ್ಷ ಹಾಜಿ ಎಸ್.ಎಂ. ರಶೀದ್ ತಿಳಿಸಿದ್ದಾರೆ.
ಈ ವಿಚಾರದ ಬಗ್ಗೆ ಗಂಭೀರವಾಗಿ ಚಿಂತಿಸಿ ಸಾಮೂಹಿಕ ಪ್ರಾರ್ಥನೆಯ ಸಂದರ್ಭ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ತಮ್ಮ ವಾಹನಗಳನ್ನು ಪಾರ್ಕ್ ಮಾಡುವಂತೆ ಅವರು ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.