ಜೆಡಿಎಸ್ ರಾಜ್ಯ ಮಾಧ್ಯಮ ವಕ್ತಾರರ ನೇಮಕ
Update: 2019-07-31 22:24 IST
ಬೆಂಗಳೂರು, ಜು.31: ಮಾಜಿ ಶಾಸಕ ವೈಎಸ್‌ವಿ ದತ್ತ, ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ 13 ಮಂದಿಯನ್ನು ರಾಜ್ಯ ಮಾಧ್ಯಮ ವಕ್ತಾರರನ್ನಾಗಿ ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಮಾಜಿ ಶಾಸಕ ವೈಎಸ್‌ವಿ ದತ್ತ, ಶಾಸಕ ಕೆ.ಎಂ.ಶಿವಲಿಂಗೇಗೌಡ, ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು, ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಎಸ್.ಎಲ್.ಭೋಜೇಗೌಡ.
ಮಾಜಿ ವಿಧಾನಪರಿಷತ್ ಸದಸ್ಯ ಮರಿಲಿಂಗೇಗೌಡ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಝಫ್ರುಲ್ಲಾ ಖಾನ್, ರಾಜ್ಯ ಹಿರಿಯ ಉಪಾಧ್ಯಕ್ಷ ಸಯ್ಯದ್ ಶಫಿಉಲ್ಲಾ, ಸಯ್ಯದ್ ಮೋಹಿದ್ ಅಲ್ತಾಫ್, ಆರ್.ಪ್ರಕಾಶ್ ಹಾಗೂ ಎಲ್.ಗಂಗಾಧರಮೂರ್ತಿಯನ್ನು ರಾಜ್ಯ ಮಾಧ್ಯಮ ವಕ್ತಾರರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.