ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 31ರಿಂದ 33ಕ್ಕೆ ಏರಿಕೆ: ಮಸೂದೆ ಅಂಗೀಕಾರ

Update: 2019-07-31 18:07 GMT

ಹೊಸದಿಲ್ಲಿ, ಜು. 31: ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ಆಗ್ರಹಕ್ಕೆ ಒಪ್ಪಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆಯನ್ನು 30ರಿಂದ 33ಕ್ಕೆ ಏರಿಸುವ ಮಸೂದೆಗೆ ಅಂಗೀಕಾರ ನೀಡಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 31 ನ್ಯಾಯಾಧೀಶರು ಇದ್ದಾರೆ. ಮಸೂದೆಗೆ ಸಂಸತ್ತು ಅಂಗೀಕಾರ ನೀಡಿರುವುದರಿಂದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆ 33ಕ್ಕೆ ಏರಿಕೆಯಾಗಲಿದೆ ಎಂದು ಕೇಂದ್ರ ಸಚಿವರ ಪ್ರಕಾಶ್ ಜಾವ್ಡೇಕರ್ ಹೇಳಿದರು. ಮೇಯಲ್ಲಿ ನಾಲ್ವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆ 31ಕ್ಕೆ ಏರಿಕೆಯಾಗಿತ್ತು. 2009ರ ನಂತರ ಸಂಸತ್ತು ಇದೇ ಮೊದಲ ಬಾರಿಗೆ ನ್ಯಾಯಮೂರ್ತಿಗಳ ಸಂಖ್ಯೆಯನ್ನು 26ರಿಂದ 31ಕ್ಕೆ ಏರಿಸಿತ್ತು.

ನ್ಯಾಯಮೂರ್ತಿಗಳ ಸಂಖ್ಯೆ ಏರಿಕೆ ಮಾಡುವಂತೆ ಹಾಗೂ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು 65ಕ್ಕೆ ಏರಿಕೆ ಮಾಡುವಂತೆ ಕೋರಿ ಕಳೆದ ತಿಂಗಳು ಗೊಗೊಯಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ 58,669 ಪ್ರಕರಣಗಳು ಬಾಕಿ ಇವೆ. ಹೊಸ ಪ್ರಕರಣಗಳು ದಾಖಲಾಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ ಎಂದು ಗೊಗೊಯಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಾನಿಸಿದ್ದ ಮೂರು ಪತ್ರದಲ್ಲಿ ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News