ತಲೆ ಮೇಲೆ ಕಲ್ಲು ಎತ್ತಿ ಮಹಿಳೆಯ ಕೊಲೆ

Update: 2019-07-31 18:30 GMT

ಬೆಂಗಳೂರು, ಜು.31: ಮಹಿಳೆಯೊಬ್ಬರನ್ನು ಕೊಲೆಗೈದಿರುವ ಘಟನೆ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದಿದೆ ಎಂದು ವರದಿಯಾಗಿದೆ.

ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ನಿಲ್ದಾಣದ ಹೊರಭಾಗದಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

ಕೊಲೆಯಾದ ಮಹಿಳೆಯು ಸುಮಾರು 30 ವರ್ಷ ವಯಸ್ಸಿನವರಾಗಿದ್ದು, ಸದ್ಯಕ್ಕೆ ಅವರ ಹೆಸರು, ವಿಳಾಸ ಪತ್ತೆಯಾಗಿಲ್ಲ. ಅವರ ಗುರುತು ಪತ್ತೆ ಹಚ್ಚುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಬಾಗಲೂರು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News