ಲಾರಿ ಢಿಕ್ಕಿ: ರಸ್ತೆ ದಾಟುತ್ತಿದ್ದ ವೃದ್ಧ ಮೃತ್ಯು

Update: 2019-07-31 18:34 GMT

ಬೆಂಗಳೂರು, ಜು.31: ಹೆದ್ದಾರಿ ದಾಟುತ್ತಿದ್ದ ವೃದ್ಧನಿಗೆ ಲಾರಿ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 4ರಲ್ಲಿ ಸಂಭವಿಸಿದೆ.

ದಾಬಸ್ ಪೇಟೆ ನಿವಾಸಿ ಮಹಾವೀರ್(60) ಸಾವನ್ನಪ್ಪಿರುವ ವೃದ್ಧ ಎಂದು ಪೊಲೀಸರು ಗುರುತಿಸಿದ್ದಾರೆ.

ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಹೆದ್ದಾರಿಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗುವ ವೇಳೆ ಅತಿ ವೇಗವಾಗಿ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ತಲೆಗೆ ಗಂಭೀರವಾಗಿ ಗಾಯಗೊಂಡು, ಮಹಾವೀರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News