ಉನ್ನಾವೊ ಅತ್ಯಾಚಾರ ಸಂತ್ರಸ್ತೆ, ಕುಟುಂಬಕ್ಕೆ ಸಿಆರ್ ಪಿಎಫ್ ಭದ್ರತೆ: ಸುಪ್ರೀಂ ಕೋರ್ಟ್ ಆದೇಶ

Update: 2019-08-01 09:47 GMT

ಹೊಸದಿಲ್ಲಿ, ಆ.1: ದೇಶಾದ್ಯಂತ ಕೋಲಾಹಲ ಸೃಷ್ಟಿಸಿರುವ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದಿಲ್ಲಿಗೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಇದರಿಂದ ಆದಿತ್ಯನಾಥ್ ಸರಕಾರ ಮುಖಭಂಗಕ್ಕೊಳಗಗಾಗಿದೆ.

ಅತ್ಯಾಚಾರ ಸಂತ್ರಸ್ತೆಗೆ ನಾಳೆಯೊಳಗೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸುಪ್ರೀಂ ಆದೇಶಿಸಿದ್ದು, ಕಾರು ಅಪಘಾತ ಪ್ರಕರಣದ ತನಿಖೆಯನ್ನು 7 ದಿನಗಳಲ್ಲಿ, ಅತ್ಯಾಚಾರ ಪ್ರಕರಣದ ತನಿಖೆಯನ್ನು 45 ದಿನಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದೆ.

ಅತ್ಯಾಚಾರ ಸಂತ್ರಸ್ತೆ, ಆಕೆಯ ಕುಟುಂಬ ಮತ್ತು ವಕೀಲರಿಗೆ ತಕ್ಷಣ ಸಿಆರ್ ಪಿಎಫ್ ರಕ್ಷಣೆ ಒದಗಿಸಬೇಕು ಎಂದು ಕೋರ್ಟ್ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News