ದಕ್ಕೆಯಲ್ಲಿ ಮೂರು ಬೋಟುಗಳಿಗೆ ಬೆಂಕಿ
Update: 2019-08-01 19:09 IST
ಮಂಗಳೂರು: ನಗರದ ಬಂದರ್ ನ ದಕ್ಕೆಯಲ್ಲಿ ಲಂಗರು ಹಾಕಿದ್ದ ಮೂರು ಮೀನುಗಾರಿಕಾ ದೋಣಿಗಳಿಗೆ ಬೆಂಕಿ ಬಿದ್ದ ಘಟನೆ ಗುರುವಾರ ಸಂಜೆ 6 ಗಂಟೆ ಸುಮಾರು ನಡೆದಿದೆ.
ದಕ್ಕೆಯ ಒಳ ಭಾಗದಲ್ಲಿ ಇಂಜಿನಿಯರಿಂಗ್ ಯಾರ್ಡ್ ನಲ್ಲಿದ್ದ ಮೂರು ಹೊಸ ಬೋಟುಗಳಿಗೆ ಆಕಸ್ಮಿಕ ಬೆಂಕಿ ಬಿದ್ದಿದೆ.
ಘಟನೆ ನಡೆದ ಸ್ಥಳಕ್ಕೆ ಕದ್ರಿ ಮತ್ತು ಪಾಂಡೇಶ್ವರದ ಅಗ್ನಿಶಾಮಕ ದಳದ ವಾಹನಗಳು ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಘಟನೆಯಲ್ಲಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಅಧಿಕಾರಿ ಅಣ್ಣಪ್ಪನ್ ನೇತೃತ್ವದಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ.