ಐಪಿಎಸ್, ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-08-01 15:22 GMT

ಬೆಂಗಳೂರು, ಆ.1: ರಾಜ್ಯ ಸರಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದ್ದು, ಗುರುವಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸೇರಿದಂತೆ 11 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್‌ರನ್ನು ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ ಹಾಗೂ ಡಿಐಜಿಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಗುಪ್ತಚರ ವಿಭಾಗದ ಡಿಐಜಿಪಿಯಾಗಿದ್ದ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್‌ರನ್ನು ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ-ಡಾ.ಅಮರ್ ಕುಮಾರ್ ಪಾಂಡೆ, ಗುಪ್ತಚರ ವಿಭಾಗದ ಎಡಿಜಿಪಿ-ಕಮಲ್ ಪಂಥ್, ರಾಜ್ಯ ಮೀಸಲು ಪಡೆಯ ಐಜಿಪಿ-ಬಿ.ದಯಾನಂದ, ಭ್ರಷ್ಟಾಚಾರ ನಿಗ್ರಹ ದಳದ ಐಜಿಪಿ-ಎಂ.ಚಂದ್ರಶೇಖರ್.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ- ಎಸ್.ಎನ್.ಸಿದ್ದರಾಮಪ್ಪ, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ- ಡಾ.ಚೇತನ್‌ಸಿಂಗ್ ರಾಥೋರ್, ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ- ಡಾ.ಅನೂಪ್ ಎ.ಶೆಟ್ಟಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ- ಕೆ.ಎಂ.ಶಾಂತರಾಜು ಹಾಗೂ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹನುಮಂತರಾಯರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಗುರುವಾರ ಆದೇಶ ಹೊರಡಿಸಿದೆ. ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಆಯುಕ್ತ ವಿ.ಪಿ.ಇಕ್ಕೇರಿಯನ್ನು ಹೊಸದಾಗಿ ಸೃಜಿಸಿರುವ ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿಯ ಹುದ್ದೆಗೆ ನಿಯೋಜಿಸಲಾಗಿದೆ. ಅಲ್ಲದೇ, ಈ ಹಿಂದಿನ ಹುದ್ದೆಯನ್ನು ಪ್ರಭಾರದಲ್ಲಿರಿಸಲಾಗಿದೆ.

ಮುಖ್ಯಮಂತ್ರಿಯ ಉಪ ಕಾರ್ಯದರ್ಶಿ ಸಿ.ಎನ್.ಮೀನಾ ನಾಗರಾಜ್ ಅವರನ್ನು ಖಜಾನೆಯ ನಿರ್ದೇಶಕಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News