ದೇಶದ ಭವಿಷ್ಯ ದೃಷ್ಟಿಯಿಂದ ಕಾಂಗ್ರೆಸ್ ಮತ್ತೆ ಆಡಳಿತಕ್ಕೆ ಬರಬೇಕು: ಬಸವರಾಜ ರಾಯ ರೆಡ್ಡಿ
ಉಡುಪಿ, ಆ.1: ಸಿದ್ಧರಾಮಯ್ಯ ನೇತೃತ್ವದ ಸರಕಾರ ಭ್ರಷ್ಟಾಚಾರ ರಹಿತ ಆಡಳಿತ ಹಾಗೂ ಜನಪರ ಯೋಜನೆಗಳೊಂದಿಗೆ ಜನರ ಮನಸ್ಸನ್ನು ಗೆದ್ದಿರು ವುದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಇದರಿಂದಾಗಿಯೇ ಕಳೆದ ಚುನಾವ ಣೆಯಲ್ಲಿ ಕಾಂಗ್ರೆಸ್ ಮತಗಳಿಕೆಯಲ್ಲಿ ಬಿಜೆಪಿಗಿಂತ ಮೇಲುಗೈ ಪಡೆದಿತ್ತು. ಆದರೆ ಸೀಟುಗಳ ಎಣಿಕೆಯಲ್ಲಿ ಕಡಿಮೆ ಬಂದು ಅಧಿಕಾರ ವಂಚನೆ ಆಗಿರ ಬಹುದು. ಆದರೂ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಭದ್ರ ಬುನಾದಿ ಇದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಸತ್ಯಶೋಧನ ಸಮಿತಿಯ ಸಂಚಾಲಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿಸಿದ ಫಲಿತಾಂಶ ಗಳಿಸದಿರಲು ಕಾರಣವನ್ನು ಕಂಡುಕೊಳ್ಳುವ ಸಲುವಾಗಿ ನಿಯುಕ್ತಿಗೊಂಡ ಸತ್ಯ ಶೋಧನಾ ಸಮಿತಿ ಸದಸ್ಯರೊಂದಿಗೆ ಉಡುಪಿಗೆ ಆಗಮಿಸಿದ ಬಸವರಾಜ ರಾಯ ರೆಡ್ಡಿ, ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ವಿವಿಧ ಬ್ಲಾಕ್ ಸಮಿತಿಯ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಳ ಸಭೆಯಲ್ಲಿ ಮಾತನಾಡುತಿದ್ದರು.
ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್ ಮಾತನಾಡಿ, ದೇಶ ಹಾಗೂ ರಾಜ್ಯಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಹಲವು ಮುಖಂಡರನ್ನು ನೀಡಿದೆ. ಪರಂಪರೆಯಿಂದ ಬಂದ ಕಾಂಗ್ರೆಸ್‌ಗೆ ರಾಷ್ಟ್ರೀಯತೆ ಹಾಗೂ ಸಮಾಜದ ಜವಾಬ್ದಾರಿ ಇದೆ. ಈ ನಿಟ್ಟಿನಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಸಮಾನ ಮನಸ್ಸಿನ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಸ್ಪರ್ಧಿಸಬೇಕಾಯಿತು ಎಂದರು.
ಆಮಿಷ ಹಾಗೂ ಪೊಳ್ಳು ಭರವಸೆಯ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಬಿಜೆಪಿಯಿಂದ ನಡೆಯುತ್ತಿದೆ. ಬಿಜೆಪಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಯನ್ನು ಬುಡಮೇಲು ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳೇ ಸಾಕ್ಷಿ. ಕರ್ನಾಟಕದಲ್ಲಿ ಸುಲಲಿತವಾಗಿ ಆಡಳಿತ ನಡೆಸುತ್ತಿದ್ದ ಸಮ್ಮಿಶ್ರ ಸರಕಾರವನ್ನು ವಾಮಮಾರ್ಗದ ಮೂಲಕ ಶಾಸಕರನ್ನು ಖರೀದಿಸಿ ಬಿಜೆಪಿ ಇಂದು ಅಧಿಕಾರ ಗಳಿಸಿದೆ. ಪಕ್ಷ ತಳಮಟ್ಟದಲ್ಲಿ ಕಾರ್ಯಕರ್ತರನ್ನು ಹೊಂದಿರುವುದರಿಂದ ಪಕ್ಷವನ್ನು ಸದೃಢ ಗೊಳಿಸಲು ಎಲ್ಲರೂ ತೊಡಗಿಸಿಕೊಳ್ಳಬೇಕಾಗಿದೆ ಎಂದರು.
ಮಾಜಿ ಸಂಸದ ಧ್ರುವನಾರಾಯಣ್ ಮಾತನಾಡಿ, ಕೇಂದ್ರ ಸರಕಾರ ಕಳೆದ ಐದು ವರ್ಷಗಳಲ್ಲಿ ಯಾವುದೇ ಒಂದು ಜನಪರ ಯೋಜನೆಯನ್ನು ಹಮ್ಮಿ ಕೊಂಡಿಲ್ಲ್ಲ. ಕಳೆದ ಯುಪಿಎ ಸರಕಾರದ ಯೋಜನೆಗಳನ್ನೇ ಕಾರ್ಯಗತ ಗೊಳಿಸಿದ್ದು ಮೋದಿ ಸಾಧನೆಯಾಗಿದೆ. ಇಂದು ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಹಾಗೂ ರೈತರ ಸಮಸ್ಯೆ ತಾಂಡವವಾಡುತ್ತಿದೆ. ಜನರು ಇಷ್ಟೊಂದು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಭಾವನಾನ್ಮಕ ವಿಷಯದಲ್ಲಿರುವ ಜನರ ಬಲಹೀನತೆಯನ್ನು ಉಪಯೋಗಿಸಿ ಕೊಂಡು ಬಿಜೆಪಿ ಅಧಿಕಾರ ಗದ್ದುಗೆ ಏರುತ್ತಿರುವುದು ದೇಶದ ದುರಂತವೆನ್ನಬೇಕು ಎಂದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿದರು. ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ವೀರ್‌ಕುಮಾರ್ ಪಾಟೀಲ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಯು.ಆರ್. ಸಭಾಪತಿ, ಪಕ್ಷದ ಮುಖಂಡರಾದ ಪಿ.ವಿ.ಮೋಹನ್ ಮಂಗಳೂರು, ವೆರೋನಿಕಾ ಕರ್ನೇಲಿಯೋ, ಗೀತಾ ವಾಗ್ಳೆ, ಕಿಷನ್ ಹೆಗ್ಡೆ ಕೊಳ್ಕೆಬೈಲ್, ಭುಜಂಗ ಶೆಟ್ಟಿ, ಬಿ. ಹಿರಿಯಣ್ಣ, ಮಲ್ಯಾಡಿ ಶಿವರಾಮ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ, ನವೀನ್‌ಚಂದ್ರ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಶೇಖರ್ ಮಡಿವಾಳ, ಮದನ್‌ಕುಮಾರ್, ಮಂಜುನಾಥ ಪೂಜಾರಿ, ನವೀನ್‌ಚಂದ್ರ ಸುವರ್ಣ, ಸತೀಶ್ ಅಮೀನ್ ಪಡುಕೆರೆ, ಇಸ್ಮಾಯಿಲ್ ಆತ್ರಾಡಿ, ಶಬ್ಬೀರ್ ಅಹ್ಮದ್, ಶಶಿಧರ ಶೆಟ್ಟಿ ಎಲ್ಲೂರು, ವಿಶ್ವಾಸ್ ಅಮೀನ್, ಗಣೇಶ್ ಕೋಟ್ಯಾನ್, ಸುಧಾಕರ ಕೋಟ್ಯಾನ್, ಕೀರ್ತಿ ಶೆಟ್ಟಿ, ಕಿರಣ್ ಕುಮಾರ್ ಉದ್ಯಾವರ, ಯತೀಶ್ ಕರ್ಕೆರ, ಉದ್ಯಾವರ ನಾಗೇಶ್ ಕುಮಾರ್, ಜನಾರ್ದನ ಭಂಡಾರ್ಕಾರ್, ಹಬೀಬ್ ಅಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಹರೀಶ್ ಕಿಣಿ ಕಾರ್ಯಕ್ರಮ ನಿರ್ವಹಿಸಿದರು.