ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2019-08-01 16:32 GMT

ಬೆಂಗಳೂರು, ಆ.1: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನೀಡುವ 2019-20 ನೆ ಸಾಲಿನ ‘ರಾಜ್ಯಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯ ಸರಕಾರಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಕೆಯು ಆ.13 ರವರೆಗೂ ಕಾಲಾವಕಾಶವಿದ್ದು, ಆನ್‌ಲೈನ್ ಮುಖಾಂತರವೂ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಶಿಕ್ಷಕರಿಂದ ಬಂದ ಅರ್ಜಿಗಳನ್ನು ಬಳಿಕ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಆಯ್ಕೆ ಸಮಿತಿಗಳಲ್ಲಿ ಪರಿಷ್ಕರಿಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. ಸೆ.5 ರಂದು ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮಕ್ಕಳಲ್ಲಿ ಶಾಶ್ವತ ಮತ್ತು ಸಂತೋಷದಾಯಕ ಕಲಿಕೆ ಉಂಟುಮಾಡುವ ಬಹುಮುಖ ವ್ಯಕ್ತಿತ್ವದ ಶಿಕ್ಷಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ www.schooleducation.kar.nic.in  ಭೇಟಿ ನೀಡಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News