ಗಾಂಜಾ ಸೇವನೆ: ಇಬ್ಬರ ಬಂಧನ
Update: 2019-08-01 22:56 IST
ಉಡುಪಿ, ಆ.1: ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಇಬ್ಬರನ್ನು ಬುಧವಾರ ಬಂಧಿಸಿದ್ದಾರೆ.
ಮೂಡನಿಡಂಬೂರು ಗ್ರಾಮದ ಸಿಸಿ ಬಸ್ ನಿಲ್ದಾಣ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತಿದ್ದ ಶರೀಕ್ (24), ರಝಾಕ್ (30) ಬಂಧಿತರು.
ಆರೋಪಿಗಳಿಬ್ಬರನ್ನು ಮಣಿಪಾಲ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಖಚಿತ ಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಆಕ್ಟ್‌ನಡಿ ಪ್ರಕರಣ ದಾಖಲಾಗಿದೆ.