ನಾಮ ನಿರ್ದೇಶನಗಳು ರದ್ದು
Update: 2019-08-02 18:51 IST
ಬೆಂಗಳೂರು, ಆ.2: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿ ಬರುವಂತಹ ಶ್ರೀ ಕಂಠೀರವ ಸ್ಟುಡಿಯೋ ನಿಯಮಿತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿಗಳಲ್ಲಿನ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರ ನಾಮ ನಿರ್ದೇಶನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರಕಾರದ ಕಾರ್ಯದರ್ಶಿಯವರನ್ನು ಈ ಮೇಲ್ಕಂಡ ನಿಗಮ, ಮಂಡಳಿ, ಅಕಾಡೆಮಿಗಳಿಗೆ ಅಧ್ಯಕ್ಷರನ್ನಾಗಿ ಮುಂದಿನ ಆದೇಶದವರೆಗೆ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.