ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Update: 2019-08-02 14:29 GMT

ಮಂಗಳೂರು, ಆ.2: ನಗರದ ಕುಲಶೇಖರ ಡೈರಿ ಸಮೀಪ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮೂಡುಪೆರಾರ ಹರಿಕಾಪದವು ನಿವಾಸಿ ಮಹಾಬಲ ಗೌಡ (47) ಮೃತರು ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯಾಹ್ನ ವೇಳೆ ಕುಲಶೇಖರ ಡೈರಿ ಸಮೀಪದ ಕಟ್ಟಡವೊಂದರ 2ನೇ ಮಹಡಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ 1ನೇ ಮಹಡಿಗೆ ಬಿದ್ದಿದ್ದಾರೆ. ಘಟನಾ ಸ್ಥಳದಲ್ಲಿದ್ದ ಕಾರ್ಮಿಕರು ಕೂಡಲೇ ಅವರನ್ನು ನಗರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಗಾಯಗೊಂಡ ವ್ಯಕ್ತಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ವಿಷಯ ತಿಳಿದ ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News