ಆ.3: ಡಾ. ರಿಚರ್ಡ್ ಕ್ಯಾಸ್ಟಲಿನೋ ಜೊತೆ ಸಂವಾದ
ಮಂಗಳೂರು, ಆ.2: ಕರ್ನಾಟಕ ಚಲನಚಿತ್ರ ಅಕಾಡಮಿಯು ಮಂಗಳೂರು ವಿವಿ ಸಹಯೋಗದೊಂದಿಗೆ ಹಿರಿಯ ಚಲನಚಿತ್ರ ನಿರ್ದೇಶಕ ಡಾ. ರಿಚರ್ಡ್ ಕ್ಯಾಸ್ಟಲಿನೋ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಆ.3ರಂದು ಸಂಜೆ 5 ಗಂಟೆಗೆ ನಗರದ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಂಡಿದೆ ಎಂದು ಚಲನಚಿತ್ರ ಅಕಾಡಮಿಯ ಅಧ್ಯಕ್ಷ ಡಾ. ನಾಗತಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು ‘ಬೆಳ್ಳಿ ಹೆಜ್ಜೆ’ಯಲ್ಲಿ ನಮ್ಮೆಂದಿಗೆ ಎಂಬ ವಿಶಿಷ್ಟ ಕಾರ್ಯಕ್ರಮದಲ್ಲಿ ಡಾ. ರಿಚರ್ಡ್ ಕ್ಯಾಸ್ಟಲಿನೋ ಜೊತೆ ಸಂವಾದ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ, ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ, ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಜೇಶ್ ಬ್ರಹ್ಮಾವರ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ, ‘ಬೆಳ್ಳಿ ಹೆಜ್ಜೆ’ಯ ನಿರ್ದೇಶಕ ಯಾಕೂಬ್ ಖಾದರ್ ಗುಲ್ವಾಡಿ, ಸಾಹಿತಿಗಳಾದ ಡಾ. ನಾ.ದ. ಶೆಟ್ಟಿ, ತಮ್ಮ ಲಕ್ಷ್ಮಣ ಉಪಸ್ಥಿತರಿದ್ದರು.