ಹಿರಿಯ ಅಧಿಕಾರಿಗಳ ಕಿರುಕುಳ ಆರೋಪ: ಆತ್ಮಹತ್ಯೆಗೆ ಯತ್ನಿಸಿದ್ದ ಸರ್ವೇಯರ್ ಮೃತ್ಯು
ಉಡುಪಿ, ಆ.2: ಹಿರಿಯ ಅಧಿಕಾರಿಗಳ ಕಿರುಕುಳದ ಬಗ್ಗೆ ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ ಬ್ರಹ್ಮಾವರ ತಾಲೂಕು ಕಚೇರಿಯ ಭೂ ಮಾಪನ ಇಲಾಖೆಯ ಸರ್ವೆಯರ್, ಹಂದಾಡಿ ಕಲ್ಬೆಟ್ಟು ನಿವಾಸಿ ಅಶೋಕ ಭೈರವಾಡಗೆ(56) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಆ.1ರಂದು ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇವರು ಜು.24ರಂದು ಬ್ರಹ್ಮಾವರ ತಾಲೂಕು ಕಚೇರಿಯ ಭೂಮಾಪನ ಇಲಾಖೆಯಲ್ಲಿ ಸರ್ವೇಯರ್ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದರು. ಜು.28ರಂದು ‘ಕಚೇರಿಯವರ ಕಿರಿಕಿರಿಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂಬುದಾಗಿ ಮರಣ ಪತ್ರ ಬರೆದು ಅಜ್ಜರಕಾಡು ಪಾರ್ಕ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಮಧ್ಯೆ ಅಶೋಕ್ ಪತ್ನಿ ನೀಡಿದ ದೂರಿನಂತೆ ಅಶೋಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಇಲಾಖೆಯ ಹಿರಿಯ ಅಧಿಕಾರಿ ಗಳಾದ ಸುಬ್ರಹ್ಮಣ್ಯ ಹಾಗೂ ಮಂಜುನಾಥ ಎಂಬವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.