×
Ad

ಶ್ರೀಕೃಷ್ಣದೇವರಾಯ ವಿವಿ ನೂತನ ಕುಲಪತಿಯಾಗಿ ಪ್ರೊ.ಸಿದ್ದು ಅಲಗೂರು ಅಧಿಕಾರ ಸ್ವೀಕಾರ

Update: 2019-08-02 22:14 IST

ಬಳ್ಳಾರಿ, ಆ.2: ಜಿಲ್ಲೆಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಸಿದ್ದು ಅಲಗೂರು ಅಧಿಕಾರ ಸ್ವೀಕರಿಸಿದರು.

ಬಾಗಲಕೋಟೆ ಜಿಲ್ಲೆಯ ತೇರದಾಳದವರಾದ ಪ್ರೊ.ಸಿದ್ದು ಅಲಗೂರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂಜಿನಿಯರಿಂಗ್ ಪದವಿ, ಅಲಹಾಬಾದ್‌ನ ಮೋತಿಲಾಲ್ ನೆಹರು ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ಧಾರವಾಡ ಎಸ್‌ಡಿಎಂ ಎಂಜಿಯರಿಂಗ್ ಕಾಲೇಜಿನಲ್ಲಿ ಉದ್ಯೋಗ ಆರಂಭಿಸಿದ ಅವರು, ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕಾಲೇಜುಗಳಲ್ಲೂ ಕಾರ್ಯನಿರ್ವಹಿಸಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ನೇಮಕಗೊಂಡು, ನಂತರ ಕುಲಸಚಿವರಾಗಿ ಸೇವೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News