×
Ad

ಮೈಸೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಎಐಟಿಯುಸಿ ಪ್ರತಿಭಟನೆ

Update: 2019-08-02 23:30 IST

ಮೈಸೂರು,ಆ.2: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿಂದು ಪಾಲ್ಗೊಂಡ ಪ್ರತಿಭಟನಾಕಾರರು ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧ ನೀತಿಯನ್ನು ಕೈಬಿಡಬೇಕು. ಕಾರ್ಮಿಕರ ಪರವಾದ ನೀತಿಯನ್ನು ಮಂಡಿಸಬೇಕು. ಕಾರ್ಮಿಕರ ಕಾನೂನುಗಳನ್ನು ಮಾಲಕರ ಪರವಾಗಿ ತಿದ್ದುಪಡಿ ಮಾಡಲಾಗಿದೆ. ಕನಿಷ್ಟ ಕೂಲಿ 24 ಸಾವಿರ ಜಾರಿ ಮಾಡಿಲ್ಲ. ಕೇಂದ್ರ ಸರ್ಕಾರ ಕಾರ್ಪೋರೇಶನ್ ಪರವಾಗಿ ವರ್ತಿಸುತ್ತಿದೆ. ದೇಶದ ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣ ಮಾಡಲು ಹೊರಟಿದೆ ಎಂದು ಆರೋಪಿಸಿದರು.

ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಕಾರ್ಮಿಕರ ಪರವಾದ ನೀತಿಯನ್ನು ಮಂಡಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಹರೀಶ್, ಗೋವಿಂದಸ್ವಾಮಿ, ಗುರುಮೂರ್ತಿ, ಸುನೀತಾ, ರಾಜಲಕ್ಷ್ಮಿ, ಮಹೋನ್ ಸೇರಿದಂತೆ  ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News