ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ

Update: 2019-08-03 14:44 GMT

ಬೆಂಗಳೂರು, ಆ. 3: ರಾಜ್ಯದ ಆಡಳಿತ ಯಂತ್ರಾಂಗಕ್ಕೆ ಚುರುಕು ಮುಟ್ಟಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ನಗರಾಭಿವೃದ್ಧಿ ಸೇರಿ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಶನಿವಾರ ವಿಧಾನಸೌಧದ ಮೂರನೆ ಮಹಡಿಯಲ್ಲಿರುವ ಸಿಎಂ ಕಚೇರಿಯಲ್ಲಿ ತನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಸಂಬಂಧ ಹಿರಿಯ ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡಿದರು. ಅತೀವೃಷ್ಟಿ ಮತ್ತು ಅನಾವೃಷ್ಟಿ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಲಹೆಗಾರ ಲಕ್ಷ್ಮಿ ನಾರಾಯಣ್, ಕಾರ್ಯದರ್ಶಿ ಶಿವಯೋಗಿ ಕಳಸದ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಝ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಅಪರ ಕಾರ್ಯದರ್ಶಿ ವಿ.ಪಿ.ಇಕ್ಕೇರಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News