ಕಾಸರಗೋಡು: ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ. ವ್ಯಾಸಾಂಗ ಆರಂಭ

Update: 2019-08-03 12:09 GMT

ಕಾಸರಗೋಡು: ಪೆರಿಯಾದಲ್ಲಿರುವ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ 2019-20ನೇ ಶೈಕ್ಷ ಣಿಕ ವರ್ಷದಿಂದ ಕನ್ನಡ ಅಧ್ಯಯನ ವಿಭಾಗ ಆರಂಭಗೊಂಡಿದೆ.

ಕನ್ನಡ ಎಂಎ ಪದವಿ ಶಿಕ್ಷ ಣಕ್ಕೆ ಅವಕಾಶವಿದ್ದು, ಆಸಕ್ತ ವಿದ್ಯಾರ್ಥಿಗಳು ಆ. 20ರೊಳಗೆ ಸೂಕ್ತ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಯಾವುದೇ ಪದವಿ ಶಿಕ್ಷ ಣದಲ್ಲಿ ಕನ್ನಡವನ್ನು ಐಚ್ಛಿಕ ವಿಷಯವನ್ನಾಗಿ ಅಭ್ಯಾಸ ಮಾಡಿರಬೇಕು, ಕನಿಷ್ಠ ಶೇ. 50 ಅಂಕಗಳನ್ನು ಪಡೆದಿರಬೇಕು.

ಎಸ್‌ಸಿ, ಎಸ್‌ಟಿ ವಿಭಾಗದವರಿಗೆ ಶೇ. 45 ಅಂಕಗಳಿದ್ದರೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವಿದೆ. ಆಸಕ್ತರು ಕೇಂದ್ರ ವಿವಿಯ ಕನ್ನಡ ವಿಭಾಗವನ್ನು ಸಂಪರ್ಕಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಿಶ್ವವಿದ್ಯಾನಿಲಯದ  ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಕರ್ನಾಟಕದ ಅಭ್ಯರ್ಥಿಗಳಿಗೆ ಕರ್ನಾಟಕ ಸರಕಾರದ  ಅಭಿವೃದ್ಧಿ ಪ್ರಾಧಿಕಾರ ದಿಂದ 25,000 ರೂ ವ್ಯಾಸಂಗ ವೇತನವನ್ನು ಪಡೆಯುವ  ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಕೇಂದ್ರೀಯ ವಿಶ್ವ ವಿದ್ಯಾಲಯದ ಕುಲ ಸಚಿವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News