ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಸ್ ಢಿಕ್ಕಿ
Update: 2019-08-03 20:02 IST
ಮಂಗಳೂರು, ಆ.3: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ನಗರದ ಲೇಡಿಹಿಲ್ ಸಮೀಪದ ಚಿಲಿಂಬಿಯಲ್ಲಿ ಶನಿವಾರ ಸಂಜೆ ನಡೆದಿದೆ.
ಮುಲ್ಕಿ ಕಡೆಯಿಂದ ಮಂಗಳೂರಿಗೆ ಕಡೆಗೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.
ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತದಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಅಪಘಾತದ ಕಾರಣದಿಂದಾಗಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
ಸ್ಥಳಕ್ಕೆ ಉರ್ವ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.