ದಿಢೀರ್ ವರ್ಗಾವಣೆ; ಅಲೋಕ್ ಕುಮಾರ್ ಬೇಸರ ?

Update: 2019-08-03 14:40 GMT

ಬೆಂಗಳೂರು, ಆ.3: ದಿಢೀರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರದ ಕ್ರಮದ ಬಗ್ಗೆ ನಿರ್ಗಮಿತ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 

ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಭಾಸ್ಕರ್ ರಾವ್ ಅವರನ್ನು ನೇಮಕ ಮಾಡಿ, ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಆದರೆ, ಕೇವಲ 45 ದಿನಗಳಲ್ಲಿಯೇ ನನ್ನನ್ನು ವರ್ಗಾಯಿಸಿರುವುದು ಸರಿಯಿಲ್ಲ ಎಂದು ತಮ್ಮ ಆಪ್ತ ವಲಯದಲ್ಲಿ ಅಲೋಕ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಿ. ಸುನೀಲ್‌ಕುಮಾರ್ ಅವರ ನಂತರ ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಅಲೋಕ್‌ ಕುಮಾರ್, ಜೂ.17ರಂದು ಅಧಿಕಾರ ವಹಿಸಿಕೊಂಡಿದ್ದರು. ಅದಾಗಿ 45 ದಿನಕ್ಕೇ ಅವರನ್ನು ಕೆಎಸ್‌ಆರ್‌ಪಿ ಎಡಿಜಿಪಿ ಆಗಿ ಶುಕ್ರವಾರ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ. ಆದರೆ, ತ್ವರಿತ ಅವಧಿಯಲ್ಲಿಯೇ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಶ್ನಿಸಿ, ಅಲೋಕ್ ಕುಮಾರ್ ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News