ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ಕಾನೂನು ಅರಿವು
Update: 2019-08-03 20:28 IST
ಉಡುಪಿ, ಆ.3: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ ಉಡುಪಿ, ಆಶ್ರಯ ಸಮುದಾಯ ಸಂಘಟನೆ ಹಾಗೂ ಸಾರಥ್ಯ ಪಯಣ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯ ದವರಿಗಾಗಿ ಜಿಲ್ಲಾ ಮಟ್ಟದ ಕಾನೂನು ಅರಿವು ಕಾರ್ಯಕ್ರಮ ಆ.7ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ. ಜೋಷಿ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.