ರಾಷ್ಟ್ರ ಪ್ರಶಸ್ತಿಗಾಗಿ ವ್ಯಕ್ತಿ, ಸಂಸ್ಥೆಗಳಿಂದ ಅರ್ಜಿ ಆಹ್ವಾನ

Update: 2019-08-03 16:18 GMT

ಬೆಂಗಳೂರು, ಆ.3: ಭಾರತ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ 2019ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಈ ಪ್ರಶಸ್ತಿಗೆ ಅರ್ಹರಿರುವ ವಿಕಲಚೇತನ ವ್ಯಕ್ತಿಗಳು ಹಾಗೂ ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸಂಸ್ಥೆಗಳು ಆಯಾ ಜಿಲ್ಲೆಗಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಶಿಫಾರಸ್ಸಿನೊಂದಿಗೆ ಆಂಗ್ಲ ಭಾಷೆಯಲ್ಲಿ ಅರ್ಜಿಯನ್ನು ಪೂರಕ ದಾಖಲೆಗಳೊಡನೆ ಆ.9ರೊಳಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಳಿಗಾಗಿ ವೆಬ್‌ಸೈಟ್ ವಿಳಾಸ: www.disabilityaffairs.gov.in  ನ್ನು ಪರಿಶೀಲಿಸಲು ಮತ್ತು ಆಯಾ ಜಿಲ್ಲೆಗಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಅಥವಾ ನಿರ್ದೇಶಕರು, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಹಾಗೂ ದೂ: 080-22866066, 22866046, 22860907 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News