ಕೈದಿಗಳ ಸ್ಥಿತಿಗತಿ ಕುರಿತು ಹೈಕೋರ್ಟ್‌ಗೆ ಪ್ರಮಾಣ ಪತ್ರ

Update: 2019-08-03 16:54 GMT

ಬೆಂಗಳೂರು, ಆ.3: ರಾಜ್ಯವ್ಯಾಪಿ ಕಾರಾಗೃಹಗಳಲ್ಲಿನ ಕೈದಿಗಳ ಸ್ಥಿತಿಗತಿ ಕುರಿತು ರಾಜ್ಯ ಸರಕಾರ, ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆ ಮಾಡಿದೆ ಎಂದು ತಿಳಿದುಬಂದಿದೆ.

ರಾಜ್ಯದ ಕಾರಾಗೃಹಗಳಲ್ಲಿ 13,622 ಕೈದಿಗಳನ್ನು ಬಂಧಿಸಿ ಇಡಬಹುದು. ಆದರೆ, ಪ್ರಸ್ತುತ ಕಾರಾಗೃಹಗಳಲ್ಲಿ 15,257 ಕೈದಿಗಳಿದ್ದಾರೆ. ಕಾರಾಗೃಹಗಳ ಸಾಮರ್ಥ್ಯಕ್ಕಿಂತ ಶೇ.11ರಷ್ಟು ಹೆಚ್ಚು ಕೈದಿಗಳನ್ನು ಕಾರಾಗೃಹದಲ್ಲಿಡಲಾಗಿದೆ ಎಂದು ತಿಳಿಸಿದೆ.

ಜೈಲುಗಳಲ್ಲಿ ಕೈದಿಗಳ ಅಸಹಜ ಸಾವುಗಳು ಸಂಭವಿಸಿದಾಗ ಅವರ ಕುಟುಂಬಸ್ಥರಿಗೆ ಪರಿಹಾರ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಸ್ವಯಂಪ್ರೇರಿತ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ಹಾಗೂ ನ್ಯಾಯಧೀಶ ಎ.ಎಸ್ ಬೆಳ್ಳುಂಕೆ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಕಾರಾಗೃಹಗಳ ಅಧೀಕ್ಷಕ ಕೆ.ಸುರೇಶ್ ಸಲ್ಲಿಸಿರುವ ಪ್ರಮಾಣ ಪತ್ರವನ್ನು ಸರಕಾರದ ಪರ ವಕೀಲರು ಸಲ್ಲಿಸಿದರು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News