ಚತ್ತೀಸ್‌ಗಢ: 7 ಮಾವೋವಾದಿಗಳ ಹತ್ಯೆ

Update: 2019-08-03 17:28 GMT

ರಾಯ್‌ಪುರ, ಆ. 3: ಚತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ಭದ್ರತಾ ಪಡೆ ಶನಿವಾರ ನಡೆಸಿದ ಎನ್‌ಕೌಂಟರ್‌ನಲ್ಲಿ 7 ಮಂದಿ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ನ ತಂಡ ಬಘ್ನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸೀತಾಗೋಟಾ ಗ್ರಾಮದ ಸಮೀಪದ ಅರಣ್ಯದಲ್ಲಿ ಬೆಳಗ್ಗೆ 6 ಗಂಟೆಗೆ ಶೋಧ ಕಾರ್ಯಾಚರಣೆ ನಡೆಸಿತು. ಈ ಸಂದರ್ಭ ಭದ್ರತಾ ಪಡೆ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಗುಂಡಿನ ಚಕಮಕಿಯಲ್ಲಿ 7 ಮಂದಿ ಮಾವೋವಾದಿಗಳು ಹತರಾದರು ಎಂದು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಮಾವೋವಾದಿ ನಿಗ್ರಹ ಕಾರ್ಯಾಚರಣೆ) ಸುಂದರ್‌ರಾಜ್ ಪಿ. ತಿಳಿಸಿದ್ದಾರೆ. ‘‘ಎನ್‌ಕೌಂಟರ್ ನಡೆದ ಸ್ಥಳದಿಂದ ಇದುವರೆಗೆ ಒಂದು ಎ.ಕೆ. 47 ಸಹಿತ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳ ಜೊತೆಗೆ 7 ಮಂದಿ ಮಾವೋವಾದಿಗಳ ಮೃತದೇಹಗಳು ಪತ್ತೆಹಚ್ಚಲಾಗಿದೆ’’ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News