ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದನೆ: ಆರೋಪಿ ಸೆರೆ

Update: 2019-08-03 17:32 GMT

ಬಂಟ್ವಾಳ : ಕುಳ ಗ್ರಾಮದ ಮಹಿಳೆಯೋರ್ವರಿಗೆ ಅವಾಚ್ಯವಾಗಿ ನಿಂದಿಸಿದ ಆರೋಪದ ಮೇರೆಗೆ ಯುವಕನೋರ್ವನನ್ನು ವಿಟ್ಲ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕುಳ ಗ್ರಾಮದ ಉರಿಮಜುಲು ನಿವಾಸಿ ಪುನೀತ್ ಪ್ರಸಾದ್ (20) ಬಂಧಿತ ಆರೋಪಿ. 

ಮಹಿಳೆಯ ಪತಿ ಮೃತಪಟ್ಟಿದ್ದು, ತನ್ನ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದಾರೆ. ಈ ಸಂಬಂಧ ಆರೋಪಿಯು ರಾತ್ರಿ ಮನೆಗೆ ಬಂದು ವಿನಾಃ ಕಾರಣ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಎಂದು‌ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News