ಸಾತ್ವಿಕ್‌ಸಾಯಿರಾಜ್ -ಚಿರಾಗ್ ಶೆಟ್ಟಿ ಫೈನಲ್‌ಗೆ

Update: 2019-08-03 17:52 GMT

ಬ್ಯಾಂಕಾಕ್, ಆ.3: ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಬಿಡಬ್ಲುಎಫ್ ಸೂಪರ್-500 ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿರುವ ಭಾರತದ ಮೊದಲ ಜೋಡಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ವಿಶ್ವದ ನಂ.16ನೇ ಡಬಲ್ಸ್ ಆಟಗಾರರಾದ ಸಾತ್ವಿಕ್‌ಸಾಯಿರಾಜ್-ಚಿರಾಗ್ ಶೆಟ್ಟಿ ಶನಿವಾರ 63 ನಿಮಿಷಗಳ ಕಾಲ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ 19ನೇ ರ್ಯಾಂಕಿನ ಕೊರಿಯಾದ ಜೋಡಿ ಕೊ ಸಂಗ್ ಹ್ಯೂನ್ ಹಾಗೂ ಶಿನ್ ಬಾಯೆಕ್ ಚೆಯೊಲ್‌ರನ್ನು 22-20, 22-24, 21-9 ಗೇಮ್‌ಗಳ ಅಂತರದಿಂದ ಮಣಿಸಿದರು.

ರಾಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ 2019ರ ಋತುವಿನಲ್ಲಿ ಮೊದಲ ಬಾರಿ ಫೈನಲ್‌ಗೆ ತಲುಪಿದ್ದಾರೆ. 2018ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಫೈನಲ್‌ಗೆ ತಲುಪಿದ್ದ ಅವರು ಪುರುಷರ ಡಬಲ್ಸ್ ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News