ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಕೊಲೆ ಪ್ರಕರಣ: ಆರೋಪಿ ಬಂಧನ
Update: 2019-08-03 23:51 IST
ಮಂಡ್ಯ, ಆ.3: ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದಲ್ಲಿ ಜುಲೈ 18 ರಂದು ನಡೆದಿದ್ದ ದಂಪತಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅದೇ ಗ್ರಾಮದ ಯೋಗೇಶ್ ಬಂಧಿತ ಆರೋಪಿ. ಈತ ದಂಪತಿಯನ್ನು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡೇಗೌಡ, ಲಲಿತಮ್ಮ ದಂಪತಿಯನ್ನು ಅವರ ಮನೆಯಲ್ಲೇ ಮಲಗಿದ್ದಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕೆ.ಆರ್.ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.