ಉತ್ತರ ಕರ್ನಾಟಕಕ್ಕೆ ಜಲ ದಿಗ್ಬಂಧನ ಭೀತಿ....

Update: 2019-08-03 18:30 GMT

ನೆರೆಯ ಮಹಾರಾಷ್ಟ್ರದಲ್ಲಿ ಎಡಬಿಡದೆ ಸರಿಯುತ್ತಿರುವ ಮಳೆಯಿಂದಾಗಿ ಕೋಯ್ನಿ ಜಲಾಶಯದಿಂದ ಹೆಚ್ಚಿನ ನೀರನ್ನು ಹೊರಗೆ ಬಿಡುತ್ತಿರುವ ಪರಿಣಾಮ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಕೃಷ್ಣಾ ನದಿ ಪಾತ್ರದ ನೂರಾರು ಗ್ರಾಮಗಳ ಜನತೆ ಜಲ ದಿಗ್ಬಂಧನ ಭೀತಿಯಲ್ಲಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ರಾಯಬಾಗ, ಅಥಣಿ ತಾಲೂಕಿನ ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಪಂಚಗಂಗಾ ನದಿ ತೀರದ 70ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹದಿಂದ ಪೀಡಿತವಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ತೀವ್ರ ಹೆಚ್ಚಳವಾಗಿದ್ದು ಭಾರೀ ಪ್ರವಾಹ ಸಾಧ್ಯತೆ ಇದೆ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯ ಗಳಿಂದಲೂ ಅಧಿಕ ಪ್ರಮಾಣದ ನೀರನ್ನು ಹರಿಬಿಡಲಾಗುತ್ತಿದ್ದು ರಾಯಚೂರು, ಯಾದಗಿರಿ ಜಿಲ್ಲೆಯ ಜಿಲ್ಲಾಡಳಿತ ಈಗಾಗಲೇ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor