×
Ad

ಮಂಗಳೂರು: ಜೊಯ್‌ ಅಲುಕ್ಕಾಸ್‌ನಿಂದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪುರಸ್ಕಾರ

Update: 2019-08-04 18:11 IST

ಮಂಗಳೂರು, ಆ. 4: 2018-19ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ದ.ಕ. ಜಿಲ್ಲೆಯ ವಿವಿಧ ಪ್ರೌಢಶಾಲೆಯ 32 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಷ್ಠಿತ ಆಭರಣ ಸಂಸ್ಥೆ ಜೊಯ್‌ ಅಲುಕ್ಕಾಸ್‌ನಿಂದ ಮಂಗಳೂರು ನಗರದ ಫಳ್ನೀರ್‌ನ ಶಾಖೆಯಲ್ಲಿ ಪ್ರತಿಭಾ ಪುರಸ್ಕಾರವನ್ನು ರವಿವಾರ ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಸಚಿವ ಡಾ. ಕೆ.ಜನಾರ್ದನ್, ಅತಿಹೆಚ್ಚು ಅಂಕಗಳನ್ನು ಗಳಿಸುವ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಇದೇ ರೀತಿಯಲ್ಲಿ ಮುಂದುವರಿಸಬೇಕು. ಕೇಂದ್ರ ಲೋಕಸೇವಾ ಆಯೋಗ ನಡೆಸುವ ಐಎಎಸ್, ಐಪಿಎಸ್, ಐಎಫ್‌ಎಸ್ ಪರೀಕ್ಷೆಗಳನ್ನು ಎದುರಿಸಬೇಕು ಎಂದು ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆ ಬರೆದು ಉನ್ನತ ಹುದ್ದೆಗಳನ್ನು ಅಲಂಕರಿಸುವುದರಿಂದ ಸಾರ್ವಜನಿಕ ವಲಯದಲ್ಲಿ ಗೌರವ ಹೆಚ್ಚಲಿದೆ. ಪೋಷಕರಿಗೂ ಆತ್ಮಗೌರವ ಹೆಚ್ಚುತ್ತದೆ. ಒಳ್ಳೆಯ ಅಂಕಗಳನ್ನು ಗಳಿಸುವುದು ಸುಲಭದ ಮಾತಲ್ಲ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರ ಶ್ರಮದಿಂದ ಹೆಚ್ಚು ಅಂಕಗಳನ್ನು ಬಾಚಿಕೊಳ್ಳಬಹುದು. ಸಕಾಲದಲ್ಲಿ ಮಕ್ಕಳನ್ನು ಪ್ರೋತ್ಸಾಹಿಸಿ ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಬ್ಯಾರಿ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಖತೀಜತುಲ್ ಕುಬ್ರಾ ವಿದ್ಯಾರ್ಥಿಗಳುನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸೈಂಟ್ ತೆರೆಸಾ ಸ್ಕೂಲ್‌ನ ಹಿರಿಯ ಶಿಕ್ಷಕಿ ಜಾಸ್ಮಿನ್, ಜೊಯ್ ಅಲುಕ್ಕಾಸ್‌ನ ಶಾಖೆಯ ವ್ಯವಸ್ಥಾಪಕ ಹರೀಶ್ ಪಿ.ಎಸ್., ಸಹಾಯಕ ವ್ಯವಸ್ಥಾಪಕ ವೀರೇಂದ್ರ, ಮಾರ್ಕೆಟಿಂಗ್ ವ್ಯವಸ್ಥಾಪಕ ಮಧು ಮತ್ತಿತರರು ಉಪಸ್ಥಿತರಿದ್ದರು.

ನಿಶಾದ್ ಪರ್ವಿನ್ ಹಾಗೂ ಉನ್ನತಿ ಕೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News