×
Ad

ಮೊಳಹಳ್ಳಿ ಶಿವರಾವ್ ಸಹಕಾರ ರಂಗದ ಪ್ರೇರಕ ಶಕ್ತಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್

Update: 2019-08-04 21:36 IST

ಮಂಗಳೂರು, ಆ.4: ಸಹಕಾರ ಕ್ಷೇತ್ರಕ್ಕೆ ಭದ್ರವಾದ ನೆಲೆಯನ್ನು ಕಲ್ಪಿಸಿರುವ ಮೊಳಹಳ್ಳಿ ಶಿವರಾವ್‌ರು ಈ ಕ್ಷೇತ್ರದ ಪ್ರೇರಕ ಶಕ್ತಿಯಾಗಿದ್ದರು. ಹಾಗಾಗಿಯೇ ಸಹಕಾರ ಕ್ಷೇತ್ರವು ಅವರ ಸಂಸ್ಮರಣೆ ಮಾಡಿ ಅವರ ಆದರ್ಶ ವ್ಯಕ್ತಿತ್ವವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡುತ್ತಿದೆ. ಎಲ್ಲರನ್ನು ಒಗ್ಗೂಡಿಸಿ ಸಹಕಾರ ಎಂಬ ಜ್ಯೋತಿಯನ್ನು ಬೆಳಗಿಸಿದ ಶಿವರಾವ್‌ರು ತನ್ನ ಜೀವಿತಕಾಲದ 87 ವರ್ಷಗಳಲ್ಲಿ 58 ವರ್ಷವನ್ನು ಸಹಕಾರ ಕ್ಷೇತ್ರಕ್ಕೆ ಮೀಸಲಿರಿಟ್ಟಿರುವುದರಿಂದ ಅವರು ಸಹಕಾರ ಕ್ಷೇತ್ರದ ಪಿತಾಮಹರಾಗಿ ಸಹಕಾರಿಗಳಿಗೆ ಸ್ಮರಣೀಯರಾಗಿದ್ದಾರೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಹಾಗೂ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ರವಿವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ 139ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಸಂದರ್ಭ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಪ್ರಕಟಗೊಂಡ ‘ಕರಾವಳಿ ಸಹಕಾರಿ’ ಮಾಸ ಪತ್ರಿಕೆಯನ್ನು ಡಾ.ಎಂ.ಎನ್ ರಾಜೇಂದ್ರ ಕುಮಾರ್ ಬಿಡುಗಡೆಗೊಳಿಸಿದರು.ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಪ್ರತಿಜ್ಞಾ ವಿಧಿ ನೆರವೇರಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ.ರಾಜಾರಾಮ ಭಟ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್.ಬಿ.ಜಯರಾಮ್ ರೈ, ಕೆ.ಜೈರಾಜ್ ಬಿ.ರೈ, ಸದಾಶಿವ ಉಳ್ಳಾಲ್, ಕೆಎಂಎಫ್ ರಾಜ್ಯ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನ ನಿರ್ದೇಶಕರಾದ ಹರೀಶ್ ಆಚಾರ್, ಅನುಪಮಾ ಎ.ರಾವ್, ಸುಧಾಕರ್ ಶೆಟ್ಟಿ, ಚಿತ್ತರಂಜನ್ ಬೋಳಾರ್, ಬ್ಯಾಂಕ್‌ನ ಮಹಾಪ್ರಬಂಧಕ ಗೋಫಿನಾಥ್ ಭಟ್, ನವೋದಯ ಟ್ರಸ್ಟಿನ ಸಿಇಒ ಪೂರ್ಣಿಮಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನ ಸಿಇಒ ಪುರುಷೋತ್ತಮ ಎಸ್.ಪಿ. ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News