ಭಾರೀ ಮಳೆ: ತೀರ್ಥಹಳ್ಳಿ, ಸಾಗರ ತಾಲೂಕುಗಳ ಶಾಲೆ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

Update: 2019-08-05 14:13 GMT

ಶಿವಮೊಗ್ಗ, ಆ. 5: ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕಳೆದ ಕೆಲ ದಿನಗಳಿಂದ ಕೆಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಈ ನಡುವೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಸಾಗರ ತಾಲೂಕು ವ್ಯಾಪ್ತಿಯಲ್ಲಿ ಮಂಗಳವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ತೀರ್ಥಹಳ್ಳಿ ಹಾಗೂ ಸಾಗರ ತಾಲೂಕುಗಳಲ್ಲಿ ವರ್ಷಧಾರೆಯ ಆರ್ಭಟ ಜೋರಾಗಿದೆ. ಈ ಕಾರಣದಿಂದ ಸಾಗರ ಹಾಗೂ ತೀರ್ಥಹಳ್ಳಿ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿ (ಬಿ.ಇ.ಓ.) ಗಳು ತಮ್ಮ ತಾಲೂಕು ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ ಎಂದು ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ಮಾಹಿತಿ ನೀಡಿವೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News