ಮಲ್ಪೆ ಸುವರ್ಣ ತ್ರಿಭುಜ ಬೋಟು ಅವಘಡ: ಮೀನುಗಾರರ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ

Update: 2019-08-05 17:10 GMT

ಉಡುಪಿ, ಆ.5: ಸುವರ್ಣ ತ್ರಿಭುಜ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಮೀನುಗಾರರ ನಿಯೋಗ ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಉಡುಪಿ ಶಾಸಕ ಕೆ.ರಘುಪತಿ ಭಟ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಮೀನುಗಾರರು ಸಚಿವರನ್ನು ಭೇಟಿಯಾಗಿ ಆಳಸಮುದ್ರ ಮೀನು ಗಾರಿಕೆಗೆ ತೆರಳಿದ್ದ ವೇಳೆ ಅವಘಡಕ್ಕೀಡಾದ ಸುವರ್ಣ ತ್ರಿಭುಜ ಬೋಟ್ನಲ್ಲಿದ್ದ ಮೀನುಗಾರರ ಕುಟುಂಬಗಳಿಗೆ ಗರಿಷ್ಠ ಪರಿಹಾರವನ್ನು ನೀಡುವಂತೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಅಖಿಲ ಭಾರತ ಮೀನುಗಾರರ ವೇದಿಕೆಯ ಅಧ್ಯಕ್ಷ ವೆಲ್ಜಿ ಭಾಯಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಮಲ್ಪೆಮೀನುಗಾರರ ಸಂಘದ ನಿಕಟಪೂರ್ವ ಅಧ್ಯಕ್ಷ ಸತೀಶ್ ಕುಂದರ್, ಆನಂದ್ ಸಿ.ಕುಂದರ್, ಸಾಧು ಸಾಲ್ಯಾನ್, ದಯಾನಂದ ಸುವರ್ಣ, ಕರುಣಾಕರ ಸಾಲ್ಯಾನ್, ಗೋಪಾಲ್, ನಿತಿನ್ ಕುಮಾರ್, ರವಿರಾಜ್ ಸುವರ್ಣ, ಹರೀಶ್ ಕುಂದರ್, ರಾಜೇಶ್ ಪುತ್ರನ್, ಜಯಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News