1984ರ ಸಿಕ್ಖ್ ದಂಗೆ: ಸುಪ್ರೀಂನಿಂದ ಸಜ್ಜನ್ ಕುಮಾರ್ ಜಾಮೀನು ಅರ್ಜಿ ತಿರಸ್ಕೃತ
Update: 2019-08-05 23:16 IST
ಹೊಸದಿಲ್ಲಿ, ಆ. 5: 1984 ಸಿಕ್ಖ್ ದಂಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್‌ನ ಮಾಜಿ ನಾಯಕ ಸಜ್ಜನ್ ಕುಮಾರ್‌ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಸಜ್ಜನ್ ಕುಮಾರ್ ಸಲ್ಲಿಸಿದ ಜಾಮೀನು ಮನವಿಯನ್ನು ನ್ಯಾಯಮೂರ್ತಿಗಳಾದ ಶರದ್ ಅರವಿಂದ್ ಬೊಬ್ಡೆ ನೇತೃತ್ವದ ಹಾಗೂ ಬಿ.ಆರ್. ಗವಾಯಿ ಅವರನ್ನು ಒಳಗೊಂಡ ವಿಭಾಗೀಯ ನ್ಯಾಯಪೀಠ ತಿರಸ್ಕರಿಸಿದೆ. ಇಂದಿರಾ ಗಾಂಧಿ ಹತ್ಯೆಯ ಹಿನ್ನೆಲೆಯಲ್ಲಿ 1984 ನವೆಂಬರ್ 1ರಂದು ದಿಲ್ಲಿಯ ರಾಜ್ ನಗರ ಪ್ರದೇಶದಲ್ಲಿರುವ ಗುರುದ್ವಾರಕ್ಕೆ ಬೆಂಕಿ ಹಚ್ಚಿರುವ ಹಾಗೂ ಒಂದೇ ಕುಟುಂಬದ ಐವರು ಸದಸ್ಯರನ್ನು ಹತ್ಯೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ನ್ಯಾಯಾಲಯ ಸಜ್ಜನ್ ಕುಮಾರ್‌ನನ್ನು ದೋಷಿ ಎಂದು ಪರಿಗಣಿಸಿತ್ತು. ಎರಡು ವಾರಗಳ ಬಳಿಕ ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.
ಅನಂತರ ಸಜ್ಜನ್ ಕುಮಾರ್ ಕಾರ್ಕರ್ಡೋಮಾ ಜಿಲ್ಲಾ ನ್ಯಾಯಾಲಯದ ಮುಂದೆ ಶರಣಾಗಿದ್ದರು.