ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ: ಆ. 7ರಂದು ಶಾಲೆ, ಕಾಲೇಜುಗಳಿಗೆ ರಜೆ
ಮಂಗಳೂರು, ಆ. 6: ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನ ಮಳೆ ಮತ್ತಷ್ಟು ತೀವ್ರಗೊಳ್ಳಲಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಆ. 7ರಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಶಾಲೆ, ಕಾಲೇಜುಗಳಿಗೆ (ಪದವಿ ತರಗತಿವರೆಗೆ) ರಜೆ ಘೋಷಿಸಿದ್ದಾರೆ.
ಇದೇ ವೇಳೆ ತಗ್ಗು ಇರುವ ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸುವಂತೆಯೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೀನುಗಾರರು ಮುಂದಿನ ಮೂರು ದಿನಗಳವರೆಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯಬಾರದು. ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಲು ಸದಾ ಜಾಗೃತರಾಗಿದ್ದು, ದೂರುಗಳಿಗೆ ಸ್ಪಂದಿಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿ ವಹಿಸುವಂತೆ ಅವರು ಸೂಚಿಸಿದ್ದಾರೆ.