×
Ad

370ನೆ ವಿಧಿ ರದ್ದು: ಕೇಂದ್ರದ ನಡೆಗೆ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲ

Update: 2019-08-06 20:19 IST

ಹೊಸದಿಲ್ಲಿ, ಆ.6: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೆ ವಿಧಿಯ ರದ್ದತಿ ವಿಚಾರದಲ್ಲಿ ಕೇಂದ್ರ ಸರಕಾರದ ನಡೆಯನ್ನು ಕಾಂಗ್ರೆಸ್ ನ ಪ್ರಮುಖ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಸಿದ್ದಾರೆ.

“ಜಮ್ಮು ಕಾಶ್ಮೀರ ಮತ್ತು ಲಡಾಖ್ ವಿಷಯದಲ್ಲಿ (ಸರಕಾರದ) ನಡೆಯನ್ನು ನಾನು ಬೆಂಬಲಿಸುತ್ತೇನೆ. ಸಾಂವಿಧಾನಿಕ ಪ್ರಕ್ರಿಯೆಗಳನ್ನು ಪಾಲಿಸಿದರೆ ಮತ್ತಷ್ಟು ಉತ್ತಮವಾಗಿರುತ್ತಿತ್ತು. ಇದು ದೇಶದ ಹಿತಾಸಕ್ತಿಯ ದೃಷ್ಟಿಯದ್ದು ಮತ್ತು ನಾನು ಅದನ್ನು ಬೆಂಬಲಿಸುತ್ತೇನೆ” ಎಂದವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News