ತೀವ್ರ ಮಳೆಗೆ ಬೆಳಗಾವಿಯಲ್ಲಿ ಮೂರು ಸಾವು, 599 ಮನೆಗಳಿಗೆ ಹಾನಿ: ಜಿಲ್ಲಾಧಿಕಾರಿ

Update: 2019-08-06 15:38 GMT
ಸಾಂದರ್ಭಿಕ ಚಿತ್ರ

ಬೆಳಗಾವಿ, ಆ.6: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಇಲ್ಲಿಯವರೆಗೆ ಮೂರು ಮಂದಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಒಟ್ಟಾರೆ 599 ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಜಿಲ್ಲೆಯ ಅಥಣಿ, ಕಾಗವಾಡ, ಚಿಕ್ಕೋಡಿ, ಖಾನಾಪೂರ, ರಾಯಬಾಗ, ಹುಕ್ಕೇರಿ, ಮೂಡಲಗಿ, ಗೋಕಾಕ ತಾಲೂಕುಗಳಲ್ಲಿ ಒಟ್ಟಾರೆ 96 ಗ್ರಾಮಗಳು ಪ್ರವಾಹದಿಂದ ಬಾಧಿತವಾಗಿವೆ. 23 ಪರಿಹಾರ (ಗಂಜಿ) ಕೇಂದ್ರಗಳನ್ನು ತೆರೆಯಲಾಗಿದೆ. ಮಳೆಯಿಂದ ಜಿಲ್ಲೆಯಲ್ಲಿ ಒಟ್ಟು 80,590 ಹೇಕ್ಟರ್ ಬೆಳೆ ಹಾನಿಯಾಗಿರುತ್ತದೆ. ಇಲ್ಲಿಯವರೆಗೆ ಮೂಲ ಸೌಕರ್ಯಗಳಾದ 1,048 ಕಿ.ಮೀ ರಸ್ತೆಗಳು, 140 ಸೇತುವೆಗಳು ಮತ್ತು ಸಿಡಿ(ಚೆಕ್ ಡ್ಯಾಂ)ಗಳು, 06 ಸರಕಾರಿ ಕಟ್ಟಡಗಳು, 22 ನೀರು ಸರಬರಾಜು ಮಾರ್ಗಗಳು, 2,571 ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ.

ಅಗ್ನಿಶಾಮಕ ದಳದ 75 ಸದಸ್ಯರು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ 66 ಸದಸ್ಯರು, ಗೃಹ ರಕ್ಷಕ ದಳದ 19 ಜನರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 100 ಜನರು, ಸೇನೆಯ 150 ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News