ಆ.8ರಂದು ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್

Update: 2019-08-06 16:06 GMT

ಉಡುಪಿ, ಆ.6: 2018-19ನೆ ಸಾಲಿನ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರ ವೃಂದದ ಘಟಕದ ಒಳಗಿನ ಕೋರಿಕೆ ವರ್ಗಾವಣಾ ಕೌನ್ಸಿಲಿಂಗ್ ಪ್ರಕ್ರಿಯೆ ಶೇ.4 ಮಿತಿಗೊಳಿಸಿ ಮಣಿಪಾಲದ ರಜತಾದ್ರಿಯಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಆ.8ರಂದು ನಡೆಯಲಿದೆ.

ಬೆಳಗ್ಗೆ 10:30ರಿಂದ ಮುಖ್ಯ ಶಿಕ್ಷಕರ ಅಂತಿಮ ಆದ್ಯತಾ ಪಟ್ಟಿಯಲ್ಲಿನ ಕ್ರಮ ಸಂಖ್ಯೆ 1 ರಿಂದ 56ರವರೆಗೆ ಹಾಗೂ ವಿಶೇಷ ಶಿಕ್ಷಕರ ಆದ್ಯತಾ ಪಟ್ಟಿಯ ಕ್ರಮ ಸಂಖ್ಯೆ 01 ರಿಂದ 53ರವರೆಗಿನ ಶಿಕ್ಷಕರಿಗೆ ಕೌನ್ಸೆಲಿಂಗ್ ನಡೆಸಲಿದ್ದು, ಅಂತಿಮ ಆದ್ಯತಾ ಪಟ್ಟಿಯಲ್ಲಿರುವ ಸಂಬಂಧಪಟ್ಟ ಶಿಕ್ಷಕರು ವೇಳಾಪಟ್ಟಿಯಂತೆ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಆಯಾಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News