ಮಲ್ಪೆ ಮೀನುಗಾರರ ನಿಯೋಗದಿಂದ ವಿತ್ತ ಸಚಿವರ ಭೇಟಿ

Update: 2019-08-06 16:08 GMT

ಉಡುಪಿ, ಆ.6: ಸುವರ್ಣ ತ್ರಿಭುಜ ಬೋಟ್ನಲ್ಲಿ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ಗರಿಷ್ಟ ಪರಿಹಾರ ಸೇರಿದಂತೆ ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಮೀನುಗಾರರ ನಿಯೋಗ ಇಂದು ದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಮೀನುಗಾರರ ನಿಯೋಗ, ಫಿಶ್ ಮಿಲ್ ಉದ್ಯಮಕ್ಕೆ ವಿಧಿಸಿರುವ ಜಿಎಸ್ಟಿ ರದ್ದುಗೊಳಿಸಬೇಕು ಹಾಗೂ ಮೀನು ಗಾರಿಕೆಗೆ ಬಳಸುವ ಡೀಸೆಲ್ ಮೇಲಿನ ರೋಡ್ ಸೆಸ್ ವಿನಾಯಿತಿ ನೀಡು ವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.

ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ, ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಮಲ್ಪೆ ಮೀನುಗಾರರ ಸಂಘದ ನಿಕಟಪೂರ್ವ ಅಧ್ಯಕ್ಷ ಸತೀಶ್ ಕುಂದರ್, ಮೀನುಗಾರ ಮುಖಂಡರಾದ ನಿತಿನ್ ಕುಮಾರ್, ಜೆ.ಪಿ.ಮೆಂಡನ್, ಹರೀಶ್ ಕುಂದರ್, ಗೋಪಾಲ ಆರ್.ಕೆ. ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News