×
Ad

ಕಲ್ಮಾಡಿ ವೆಲಂಕಣಿ ಮಾತೆಯ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಚಾಲನೆ

Update: 2019-08-06 21:44 IST

ಉಡುಪಿ, ಆ.6: ಕಲ್ಮಾಡಿ ವೆಲಂಕಣಿ ಮಾತೆಯ ಪ್ರತಿಷ್ಠಾಪನೋತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ ಹಮ್ಮಿಕೊಳ್ಳಲಾಗಿರುವ ನೊವೆನಾ ಪ್ರಾರ್ಥನೆಗೆ ಮಂಗಳವಾರ ಚಾಲನೆ ನೀಡಲಾಯಿತು.

ಚರ್ಚಿನ ಆವರಣದಲ್ಲಿ ಸ್ಥಾಪಿಸಲಾದ ನೂತನ ಮಾನಸ್ಥಂಭದಲ್ಲಿ ವೆಲಂಕಣಿ ಮಾತೆಯ ಬಾವುಟವನ್ನು ಏರಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ಸಂತ ಜೋಸೆಫ್ ಸೆಮನರಿಯ ರೆಕ್ಟರ್ ವಂ. ಫ್ರಾನ್ಸಿಸ್ ಸೆರಾವೋ ಮಾತನಾಡಿ, ಮೇರಿ ಮಾತೆಯ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸುವುದರೊಂದಿಗೆ ಕುಟುಂಬಗಳನ್ನು ವಿಶ್ವಾಸದ ಬದುಕಿಗೆ ದಾರಿಯಾಗಿಸಿಕೊಳ್ಳಬೇಕು ಎಂದರು.

ಉಡುಪಿ ವಲಯ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ, ಕಲ್ಮಾಡಿ ಚರ್ಚಿನ ಧರ್ಮಗುರು ವಂ.ಆಲ್ಬನ್ ಡಿಸೋಜ, ವಾರ್ಷಿಕ ಮಹೋತ್ಸವ ಕಾರ್ಯಕ್ರಮದ ಸಂಚಾಲಕ ವಂ.ಪ್ರವೀಣ್ ಮೊಂತೆರೋ, ಅತಿಥಿ ಧರ್ಮಗುರು ವಂ.ಚಾರ್ಲ್ಸ್, ಚರ್ಚ್ ಪಾಲನಾ ಮಂಡಳಿಯ ಉಪಾ ಧ್ಯಕ್ಷ ಸಂಜಯ್ ಅಂದ್ರಾದೆ, ಕಾರ್ಯದರ್ಶಿ ಶೋಭಾ ಮೆಂಡೋನ್ಸಾ, 18 ಆಯೋಗಗಳ ಸಂಚಾಲಕ ಫಾ್ರನ್ಸಿಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News