ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಯಡಿಯೂರಪ್ಪ
Update: 2019-08-06 22:21 IST
ಹೊಸದಿಲ್ಲಿ, ಆ.6: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 10(29ಎ) ಅನ್ವಯ ಆದಾಯ ತೆರಿಗೆ ವಿನಾಯಿತಿ ನೀಡುವಂತೆ ಹಾಗೂ ರಾಜ್ಯದ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 14ನೇ ಹಣಕಾಸು ಆಯೋಗದಡಿ ಬಾಕಿ ಇರುವ ಕಾರ್ಯನಿರ್ವಹಣಾ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಮನವಿ ಸಲ್ಲಿಸಿದರು.