ಮಾತೃ ಹೃದಯಿ ಹೆಣ್ಣು ಮಗಳನ್ನು ದೇಶ ಕಳೆದು ಕೊಂಡಿದೆ: ಸುಷ್ಮಾ ಸ್ವರಾಜ್ ನಿಧನಕ್ಕೆ ದೇವೇಗೌಡ ಸಂತಾಪ

Update: 2019-08-06 18:33 GMT

ಬೆಂಗಳೂರು, ಆ.6: ಸಹೋದರಿ ಸುಷ್ಮಾ ಸ್ವರಾಜ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ತೀವ್ರ ನೋವುಂಟಾಗಿದೆ. ಅವರನ್ನು ನೋಡಿದ ತಕ್ಷಣ ಎಲ್ಲರಲ್ಲೂ ತಾಯಿ ಮನೋಭಾವ ಮೂಡುತ್ತಿತ್ತು ಎಂದು ಮಾಜಿ ಪ್ರಧಾನ ಮಂತ್ರಿ ಎಚ್.ಡಿ ದೇವೇಗೌಡ ವಿಷಾದ ವ್ಯಕ್ತಪಡಿಸಿದ್ದಾರೆ.

'ಸುಷ್ಮಾ ಸ್ವರಾಜ್ ಅವರು ಅತೀ ಚಿಕ್ಕ ವಯಸ್ಸಿನಲ್ಲೇ ಹರಿಯಾಣ ರಾಜ್ಯದಲ್ಲಿ ಸಂಪುಟ ದರ್ಜೆ ಸಚಿವೆ ಆಗಿ ಉತ್ತಮ ಕಾರ್ಯ ನಿರ್ವಹಿಸಿದ್ದರು. ಈ ದೇಶದ ಎರಡನೇ ಮಹಿಳಾ ವಿದೇಶಾಂಗ ಸಚಿವೆಯಾಗಿಯೂ ಉತ್ತಮ ಕಾರ್ಯ ನಿರ್ವಹಿಸಿದ್ದರು. ಸುಷ್ಮಾ ನಿಧನದಿಂದ ನಮ್ಮ ದೇಶ ಒಬ್ಬ ಧೈರ್ಯವಂತೆ ಹಾಗೂ ಮಾತೃ ಹೃದಯಿ ಹೆಣ್ಣು ಮಗಳನ್ನ ಕಳೆದು ಕೊಂಡಿದೆ. ಅವರ ನಿಧನದಿಂದ ರಾಷ್ಟ್ರಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News