ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2019-08-07 12:18 GMT

ಬೆಂಗಳೂರು, ಆ. 7: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.

ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ಪ್ರಕರಣವು ಆಗಸ್ಟ್ 2018ರಿಂದ ಜುಲೈ 2019ರೊಳಗೆ ನಡೆದಿರಬೇಕು. ಆಗಸ್ಟ್ 2001ರಿಂದ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10ಸಾವಿರ ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಗುವುದು.

ಪ್ರಸಕ್ತ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು, ಸಂಬಂಧಿಸಿದ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲೆಯ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಎಚ್.ಮರಿಗೌಡ ರಸ್ತೆ, ಬೆಂ.-29 ಇವರಿಗೆ ಆ.31ರೊಳಗೆ ಸಲ್ಲಿಸಬೇಕು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು ಎಂದು ಪ್ರಕಟಣೆ ಕೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News