×
Ad

ಲಿಂಗತ್ವ ಅಲ್ಪಸಂಖ್ಯಾತರ ಕುರಿತ ಸಮಾಜದ ದೃಷ್ಟಿ ಬದಲಾಗಲಿ: ಜೋಶಿ

Update: 2019-08-07 18:15 IST

ಉಡುಪಿ, ಆ.7: ಸಮಾಜದಲ್ಲಿರುವ ಎಲ್ಲರಿಗೂ ಕಾನೂನು ಅನ್ವಯವಾಗು ತ್ತದೆ. ಆದರೂ ನಮ್ಮ ಸಮಾಜದಲ್ಲಿ ಅನೇಕ ಓರೆಕೋರೆಗಳಿದ್ದು, ಇದನ್ನು ಸರಿ ಮಾಡಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಲಿಂಗತ್ವ ಅಲ್ಪಸಂಖ್ಯಾ ತರ ಕುರಿತು ಸಮಾಜದ ದೃಷ್ಟಿ ಬದಲಾಗ ಬೇಕಾಗಿದೆ ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ.ಜೋಷಿ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ, ಆಶ್ರಯ ಸಮು ದಾಯ ಸಂಘಟನೆ ಹಾಗೂ ಸಾರಥ್ಯ ಪಯಣ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಉಡುಪಿ ಜಿಪಂ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದವರಿಗಾಗಿ ಆಯೋಜಿಸಲಾದ ಜಿಲ್ಲಾ ಮಟ್ಟದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. ಆದರೆ ಸಮಾಜದಲ್ಲಿ ಕೆಲವೊಂದು ಸಮುದಾಯಗಳು ಮತ್ತು ಜನರಿಗೆ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಅವರಿಗೆ ಕಾನೂನಿನ ಅರಿವು ನೀಡಬೇಕಾಗಿದೆ. ರಾಷ್ಟ್ರೀಯ ಕಾನೂನು ಸೇವೆ ಗಳ ಪ್ರಾಧಿಕಾರದ ಮೂಲಕ ಅವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಈ ಹಿಂದೆ ಅರ್ಜಿ ನಮೂನೆಗಳಲ್ಲಿ ಪುರುಷ ಹಾಗೂ ಮಹಿಳೆ ಎಂದು ಮಾತ್ರ ನಮೂದಿಸಲಾಗುತ್ತಿತ್ತು. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೂ ಅವಕಾಶ ಕಲ್ಪಿಸಲಾಗಿದೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಗುರುತಿನ ಚೀಟಿ, ಆರೋಗ್ಯ ಕಾರ್ಡ್‌ಗಳಂತಹ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿಂಧೂ ಬಿ.ರೂಪೇಶ್ ಮಾತ ನಾಡಿ, ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸಹಾಯದ ಅಗತ್ಯವಿದ್ದು, ಆ ಸಮುದಾಯದ ಅಭಿವೃದ್ದಿಗೆ ಕಾನೂನು ರೂಪುಗೊಳಿಸಲಾಗಿದೆ. ಇದರಿಂದ ಅವರಿಗೆ ಹೆಚ್ಚಿನ ಸೌಲ್ಯಗಳನ್ನು ನೀಡಲು ಸಾಧ್ಯ ವಾಗಲಿದೆ. ಆ ಮೂಲಕ ಅವರು ಸಮಾಜದ ಮುಖ್ಯವಾಹಿನಿಯಲ್ಲಿ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

‘ಲಿಂಗತ್ವ ಮತ್ತು ಕಾನೂನು’ ವಿಷಯದ ಕುರಿತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಮಾತನಾಡಿ, ಸಂವಿಧಾನದ ಪ್ರಕಾರ ಸಮಾಜದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ. ಆದರೂ ಲಿಂಗತ್ವ ಅಲ್ಪ ಸಂಖ್ಯಾತರನ್ನು ಸಮಾಜ ಕೀಳಾಗಿ ನೋಡುತ್ತಿದೆ. ಇದು ಸಮಾಜದ ತಪ್ಪೇ ಹೊರತು ಸಮುದಾಯದ ವೈಫಲ್ಯತೆ ಅಲ್ಲ. ಕಾನೂನಿನ ಅರಿವಿನಿಂದ ಸಮಾಜದಲ್ಲಿ ನಡೆಯುವ ತಪ್ಪುಗಳನ್ನು ಕಡಿಮೆ ಮಾಡಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಐವರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿ ಕಾರಿ ವಿದ್ಯಾಕುಮಾರಿ ವಹಿಸಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಎಲ್.ಗೊನ್ಸಾಲ್ವಿಸ್, ಸಾರಥ್ಯ ಸಂಸ್ಥೆಯ ಅಧ್ಯಕ್ಷ ಪೆದ್ದಣ್ಣ, ಆಶ್ರಯ ಸಮುದಾಯ ಸಂಘಟನೆಯ ಸಂಜೀವ ವಂಡ್ಸೆ, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹೋರಾಟಗಾರ ತ್ರಿಮೂರ್ತಿ, ಸಂತೋಷ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News