ಭಾರೀ ಮಳೆ ಹಿನ್ನೆಲೆ: ಆ.8ರಂದು ದ.ಕ. ಜಿಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

Update: 2019-08-07 13:14 GMT

ಮಂಗಳೂರು, ಆ.7: ದ.ಕ. ಜಿಲ್ಲೆಯ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ತರಗತಿವರೆಗೆ) ಆ.8ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ ಹರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಆ.9ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಾವುದೇ ಅನಾಹುತಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮ ಕೈಗೊಂಡಿರುವುದಾಗಿ ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News