370 ವಿಧಿ ರದ್ದು : ರಾಷ್ಟ್ರಪತಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

Update: 2019-08-07 14:02 GMT

ಹೊಸದಿಲ್ಲಿ, ಆ.7: ಸಂವಿಧಾನದ 370 ಮತ್ತು 35ಎ ವಿಧಿಯನ್ನು ರದ್ದುಗೊಳಿಸಲು ದಾರಿ ಮಾಡಿಕೊಟ್ಟ ರಾಷ್ಟ್ರಪತಿಗಳ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದಾರೆ. ವಕೀಲ ಎಂಎಲ್ ಶರ್ಮ ಎಂಬವರು ತಮ್ಮ ಹೆಸರಿನಲ್ಲೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು 370ನೇ ವಿಧಿಯನ್ನು ರದ್ದುಗೊಳಿಸಿರುವ ರಾಷ್ಟ್ರಪತಿಗಳ ಆಗಸ್ಟ್ 5ರ ಆದೇಶ ಅಕ್ರಮ, ಅಸಾಂವಿಧಾನಿಕ , ಅನಗತ್ಯದ ಹಾಗೂ ಸಂವಿಧಾನ ವಿರೋಧಿ ಕ್ರಮವಾಗಿದೆ. ಆದ್ದರಿಂದ ತನ್ನ ಅರ್ಜಿಯ ತುರ್ತು ವಿಚಾರಣೆ ನಡೆಸಿ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.

ರಾಜ್ಯ ವಿಧಾನಸಭೆಯ ಒಪ್ಪಿಗೆಯಿಲ್ಲದೆ ಜಾರಿಯಾಗಿರುವ ರಾಷ್ಟ್ರಪತಿಗಳ ಆದೇಶ ಕಾನೂನು ಬಾಹಿರ ಮತ್ತು ಅಸಾಂವಿಧಾನಿಕವಾಗಿದೆ ಎಂದು ಶರ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News