ದ.ಕ. ಜಿಲ್ಲೆಯಲ್ಲಿ ಪ್ರಾಣಿ ಬಲಿ ನಿಷೇಧ
Update: 2019-08-07 20:11 IST
ಮಂಗಳೂರು, ಆ.7: ದ.ಕ. ಜಿಲ್ಲೆಯಲ್ಲಿ ಬಕ್ರೀದ್ ಹಾಗೂ ಇತರ ಹಬ್ಬ ಹರಿದಿನಗಳಲ್ಲಿ ಪೂಜಾ ಸ್ಥಳಗಳಲ್ಲಿ/ಮಂದಿರಗಳಲ್ಲಿ ಸಾಮೂಹಿಕ ಪ್ರಾಣಿಹತ್ಯೆಯನ್ನು ರಾಜ್ಯ ಪ್ರಾಣಿಬಲಿ ಪ್ರತಿಬಂಧಕ ಅಧಿನಿಯಮ ನಿಯಮದಂತೆ ನಿಷೇಧಿಸಲಾಗಿದೆ.
ಪ್ರಾಣಿಗಳನ್ನು ಬಲಿ ಕೊಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಗೋವು ಅಥವಾ ಎಮ್ಮೆಯ ಕರುವಿನ ವಧೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಪ್ರಾಣಿಬಲಿ ಅಥವಾ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಿದ್ದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಂದು ಪಶುಪಾಲನಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.