ನೆರೆಪೀಡಿತ ಪ್ರದೇಶಗಳ ಜನರ ನೆರವಿಗೆ ಶಾಸಕರು ಧಾವಿಸಲಿ: ಮಲ್ಲಿಕಾರ್ಜುನ ಖರ್ಗೆ

Update: 2019-08-07 15:33 GMT

ಬೆಂಗಳೂರು, ಆ.7: ನೆರೆಪೀಡಿತ ಪ್ರದೇಶಗಳ ಜನರ ನೆರವಿಗೆ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು ತಕ್ಷಣ ಧಾವಿಸಬೇಕೆಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಇರಲಿ, ಬಿಡಲಿ ಜನರ ಸಂಕಷ್ಟದ ಸಮಯದಲ್ಲಿ ಸಹಾಯ ಮಾಡುವುದು ಎಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ತಕ್ಷಣದಿಂದಲೆ ನೆರೆಪೀಡಿತ ಪ್ರದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನತೆಗೆ ನೆರವಾಗಬೇಕೆಂದು ತಿಳಿಸಿದರು.

ಬೆಳಗಾವಿ, ಚಿಕ್ಕೋಡಿ ಸೇರಿದಂತೆ ನದಿ ದಂಡೆಯ ಮೇಲಿನ ಹಳ್ಳಿಗಳಲ್ಲಿ ದೊಡ್ಡ ಅನಾಹುತವಾಗಿದೆ. ಸರಕಾರ ತಕ್ಷಣವೇ ಸಹಾಯ ಮಾಡಬೇಕಿದೆ. ಊಟದ ವ್ಯವಸ್ಥೆ, ತಾತ್ಕಾಲಿಕ ವಸತಿ ವ್ಯವಸ್ಥೆ, ಆರೋಗ್ಯ ವ್ಯವಸ್ಥೆ, ಆಹಾರಧಾನ್ಯ ತಲುಪಿಸುವ ಕೆಲಸವನ್ನು ಸರಕಾರ ಮಾಡಬೇಕೆಂದು ಅವರು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರೆ ಪ್ರದೇಶಗಳ ಜನತೆಗೆ ಬಗ್ಗೆ ವಿಶೇಷ ಗಮನ ವಹಿಸಬೇಕು. ಮನೆ ಬಿದ್ದು ಹೋಗಿರುವ ಕಡೆ ತಕ್ಷಣವೆ ತಾತ್ಕಾಲಿಕ ಸೂರಿನ ವ್ಯವಸ್ಥೆ ಮಾಡಬೇಕು. ರಾಜ್ಯ ಸರಕಾರ ಈ ಕ್ಷಣದ ಮೊದಲ ಆದ್ಯತೆ ನೆರೆಪೀಡಿತ ಜನರಿಗೆ ನೆರವಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News