×
Ad

ಪ್ರವಾಹ ಪೀಡಿತರನ್ನು ನಿಭಾಯಿಸಲು ಸರಕಾರ ವಿಫಲ, ರಾಜ್ಯಪಾಲರು ಮಧ್ಯಪ್ರವೇಶಿಸಲಿ: ಯು.ಟಿ.ಖಾದರ್

Update: 2019-08-07 21:22 IST

ಮಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿರುವುದರಿಂದ ಬಹುತೇಕ ಪ್ರದೇಶಗಳು ಜಲಾವೃತವಾಗಿವೆ. ಸುಮಾರು ಏಳು ಮಂದಿ ಮೃತಪಟ್ಟಿದ್ದು, ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಪ್ರವಾಹ ಪೀಡಿತರನ್ನು ನಿಭಾಯಿಸಲು ಸರಕಾರ ವಿಫಲವಾಗಿದ್ದು, ರಾಜ್ಯಪಾಲರು ಮಧ್ಯಪ್ರವೇಶಿಸಿ ವಿವಿಧ ಇಲಾಖೆಗಳ ಕಾರ್ಯದರ್ಶಿಗಳಿಗೆ ಆದೇಶ ನೀಡಬೇಕೆಂದು ಶಾಸಕ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.

ಸರಕಾರ ಕೋಮಾದಲ್ಲಿರುವುದರಿಂದ ಜಿಲ್ಲಾಡಳಿತ ಮತ್ತು ಅಧಿಕಾರಿಗಳು ನಿಷ್ಕ್ರಿಯರಾಗಿದ್ದಾರೆ ಮತ್ತು ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುವವರಿಲ್ಲ. ಇದುವರೆಗೆ ಯಾವುದೇ ಪರಿಹಾರ ಘೋಷಣೆಯಾಗಿಲ್ಲ. ನಿರಾಶ್ರಿತರಿಗೆ ಆಶ್ರಯ, ಆಹಾರ, ಬಟ್ಟೆಬರೆ ಒದಗಿಸಿಲ್ಲ ಆದ್ದರಿಂದ ರಾಜ್ಯಪಾಲರು ಮಧ್ಯಪ್ರವೇಶಿಸಬೇಕು, ಕಳೆದ ವರ್ಷ ಕೊಡಗಿನಲ್ಲಿ ಪ್ರವಾಹ ಪೀಡಿತವಾದ ಸಂದರ್ಭ ಅಂದಿನ ಸರಕಾರ ಯಾವ ರೀತಿ ಸ್ಪಂದಿಸಿದೆ ಎಂಬ ನಿದರ್ಶನವಿದೆ. ಅದನ್ನೇ ಮಾದರಿಯನ್ನಾಗಿ ತೆಗೆದುಕೊಂಡು ತುರ್ತು ಕೆಲಸ ಮಾಡಲಿ ಎಂದು ಮಾಜಿ ಸಚಿವ ಯು.ಟಿ.ಖಾದರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News