×
Ad

ತುಂಗಾ ಡ್ಯಾಂನಿಂದ 95,000 ಕ್ಯೂಸೆಕ್ ನೀರು ಹೊರಕ್ಕೆ, ಲಿಂಗನಮಕ್ಕಿ ಜಲಾಶಯಕ್ಕೆ 1.38 ಲಕ್ಷ ಕ್ಯೂಸೆಕ್ ಒಳಹರಿವು

Update: 2019-08-07 22:34 IST
ತುಂಗಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ದೃಶ್ಯ

ಶಿವಮೊಗ್ಗ, ಆ.7: ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಧಾರಾಕಾರ ವರ್ಷಧಾರೆಯಾಗುತ್ತಿರುವುದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳಾದ ತುಂಗಾ, ಲಿಂಗನಮಕ್ಕಿ ಹಾಗೂ ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬಂದಿದೆ.

ಬುಧವಾರದ ಮಾಹಿತಿಯಂತೆ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದ ಒಳಹರಿವು 1,38,083 ಕ್ಯೂಸೆಕ್‍ಗೆ ಏರಿಕೆಯಾಗಿದೆ. ಹೊರಹರಿವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಡ್ಯಾಂ ವ್ಯಾಪ್ತಿಯಲ್ಲಿ 167 ಮಿ.ಮೀ. ಮಳೆಯಾಗಿದ್ದು, ಮಳೆ ನೀರನ್ನೇ ವಿದ್ಯುತ್ ಉತ್ಪಾದನೆಗೆ ಬಳಸಲಾಗುತ್ತಿದೆ. ಉಳಿದಂತೆ ಡ್ಯಾಂನ ನೀರಿನ ಮಟ್ಟ 1795.30 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸುಮಾರು ಐದೂವರೆ ಅಡಿಯಷ್ಟು ನೀರು ಸಂಗ್ರಹವಾಗಿದೆ.

ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಈಗಾಗಲೇ ಗರಿಷ್ಠ ಮಟ್ಟವಾದ 588.24 ಅಡಿ ತಲುಪಿದೆ. ಪ್ರಸ್ತುತ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, 95,135 ಕ್ಯೂಸೆಕ್ ಇದೆ. 95,100 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಾಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ. ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದ ಒಳಹರಿವು 41,487 ಕ್ಯೂಸೆಕ್‍ಗೆ ಹೆಚ್ಚಳವಾಗಿದೆ. 226 ಕ್ಯೂಸೆಕ್ ಹೊರಹರಿವಿದೆ. ಡ್ಯಾಂನ ನೀರಿನ ಮಟ್ಟ 154.30 (ಗರಿಷ್ಠ ಮಟ್ಟ : 186) ಅಡಿಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News